NALIKALI

Header Ads

'ಜಮ್ಮು ಮತ್ತು ಕಾಶ್ಮೀರದಲ್ಲಿ 370 ವಿಧಿ ರದ್ದು ಮಾಡಿದ್ದು ಸರಿ, ವಿಶೇಷಾಧಿಕಾರ ಕೇವಲ ತಾತ್ಕಾಲಿಕ ನಿರ್ಧಾರವಾಗಿತ್ತು ' : ಸುಪ್ರೀಂ ಕೋರ್ಟ್

ಜಮ್ಮು ಕಾಶ್ಮೀರದ 370 ವಿಧಿ ರದ್ದತಿ 
  
                            ಎತ್ತಿ ಹಿಡಿದ ಸುಪ್ರಿಂ

      ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಲಾಗಿದ್ದ ಸಂವಿಧಾನದ ಆರ್ಟಿಕಲ್ 370 ವಿಧಿ. 2019 ರಲ್ಲಿ ಆರ್ಟಿಕಲ್ 370 ವಿಧಿ ರದ್ದು ಮಾಡಿದ್ದ ಕೇಂದ್ರ ಸರ್ಕಾರ ಆರ್ಟಿಕಲ್ 370 ಅಡಿ ವಿಶೇಷ ಅಧಿಕಾರ ನೀಡಿಕೆ ಕೇವಲ ತಾತ್ಕಾಲಿಕ ನಿರ್ಧಾರವಷ್ಟೇ ಆಗಿತ್ತು ಎಂದು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ.



        ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಲಾಗಿದ್ದ ಸಂವಿಧಾನದ ಆರ್ಟಿಕಲ್ 370 ವಿಧಿ ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಆರ್ಟಿಕಲ್ 370 ಅಡಿ ವಿಶೇಷ ಅಧಿಕಾರ ನೀಡಿಕೆ ಕೇವಲ ತಾತ್ಕಾಲಿಕ ನಿರ್ಧಾರವಷ್ಟೇ ಆಗಿತ್ತು ಎಂದು ಸುಪ್ರೀಂಕೋರ್ಟ್ ಹೇಳಿದೆ. ಯುದ್ಧದ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಲಾಗಿತ್ತು ಎಂದಿರುವ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದತಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದೆ.

     ಕೇಂದ್ರ ಸರ್ಕಾರಕ್ಕೆ , ರಾಷ್ಟ್ರಪತಿಗಳಿಗೆ ಆರ್ಟಿಕಲ್ 370 ರದ್ದತಿ ಅಧಿಕಾರ ಇದೆ. ರಾಷ್ಟ್ರಪತಿಗಳ ನಿರ್ಧಾರವು ಸುಪ್ರೀಂಕೋರ್ಟ್ ನ ಪರಾಮರ್ಶೆ ಗೆ ಒಳಪಡುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಇದ್ದಾಗ ರಾಜ್ಯದಲ್ಲಿ ವಿಧಾನಸಭೆಗೆ ಇರಲಿಲ್ಲ ಎಂದು ಭಾವಿಸಬಾರದು, ಎಂದಿರುವ ಸುಪ್ರೀಂ ಕೋರ್ಟ್, ಕರ್ನಾಟಕದ ಎಸ್. ಆರ್. ಬೊಮ್ಮಾಯಿ ಪ್ರಕರಣ ಉಲ್ಲೇಖಿಸಿದೆ.  ಅಷ್ಟೇ ಅಲ್ಲ ಸಪ್ಟಂಬರ್ 30ರ ಒಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಬೇಕು ಹಾಗೂ ಆದಷ್ಟು ಬೇಗ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

     ಸಂವಿಧಾನದ 370 ವಿಧಿಯನ್ನು 2019 ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧಪಟ್ಟ ನ್ಯಾಯಾಲಯ ಈ ತೀರ್ಪನ್ನು ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕೃಷ್ಣ ಕೌಲ್ , ಸಂಜೀವ್ ಖನ್ನ , ಬಿ ಆರ್ ಗವಾಯಿ ಹಾಗೂ ಜಸ್ಟಿಸ್ ಸೂರ್ಯಕಾಂತ್ ಅವರಿದ್ದ ಪೀಠ ಈ ಮಹತ್ವ ತೀರ್ಮಾನ ಕೈಗೊಂಡಿದೆ....

      2019 ಅಗಸ 5 ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ರದ್ದು ಮಾಡಿದ್ದ ಕೇಂದ್ರ ಸರ್ಕಾರ , ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳನ್ನು ವಿಭಜಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತ್ತು. ಈ ಭಾಗಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನಗಳನ್ನು ರದ್ದು ಮಾಡಿತ್ತು.

     ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕೇಂದ್ರ ಸರ್ಕಾರವು ಏಕ ಪಕ್ಷಿಯವಾಗಿ ರದ್ದು ಮಾಡಲು ಸಾಧ್ಯವಿಲ್ಲ ಎಂದು ಪ್ರತಿವಾದಿಗಳು ವಾದಿಸಿದ್ದರು.  1957ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370 ಅಡಿ ವಿಶೇಷ ಅಧಿಕಾರ ಜಾರಿಯಲ್ಲಿತ್ತು. ಆದರೆ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಯೇ ಇಲ್ಲದ ವೇಳೆ ವಿಶೇಷ ಅಧಿಕಾರ ರದ್ದುಪಡಿಸಿದ್ದು ಏಕೆ ಎಂದು ಪ್ರತಿಪಾದಿಗಳು ಪ್ರಶ್ನಿಸಿದ್ದರು.

Post a Comment

0 Comments